ಚೆನ್ನೈ: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ.
ಮೃತರನ್ನು ಚೈತನ್ಯ (21), ವಿಷ್ಣು (21), ಚೇತನ್, ಯುಕೇಶ್, ನಿತೀಶ್, ವರ್ಮಾ, ರಾಮ್‌ಕೋಮನ್ ಎಂದು ಗದುರುತಿಸಲಾಗಿದೆ. ಎಲ್ಲರೂ ಚೆನ್ನೈ ಎಸ್‌ಆರ್‌ಎಂ. ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು, ಈ ವೇಳೆ ನಿನ್ನೆ ರಜೆ ಇದ್ದ ಕಾರಣ 5 ಮಂದಿ ಚಿತ್ತೂರು ಜಿಲ್ಲೆಯ ಕಣ್ಣಿಪಾಕ್ಕಂ ವಿನಾಯಕ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳಿ ಚೆನ್ನೈಗೆ ವಾಪಸಾಗಿದ್ದರು. ತಿರುವಳ್ಳೂರು ಜಿಲ್ಲೆಯ ರಾಮಂಚೇರಿಯಲ್ಲಿ ಕಾರು ಸಾಗುತ್ತಿದ್ದಾಗ ರಾಜಸ್ಥಾನ ನೋಂದಣಿ ಫಲಕದ ಕಂಟೈನರ್ ಲಾರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದರಲ್ಲಿ ಚೇತನ್, ಯುಕೇಶ್, ನಿತೀಶ್, ವರ್ಮಾ ಮತ್ತು ರಾಮಕೋಮನ್ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚೈತನ್ಯ ಮತ್ತು ವಿಷ್ಣು ಎಂಬ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತಿರುವಳ್ಳೂರು ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಪೆರುಮಾಳ್ ಭೇಟಿ ನೀಡಿ ವಾಹನದಲ್ಲಿ ಸಿಲುಕಿದ್ದ ಯುವಕರ ಮೃತದೇಹಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕನಕಮ್ಮಸತ್ರಂ ಪೊಲೀಸ್ ಇಲಾಖೆ ಅಪಘಾತದ ತನಿಖೆ ನಡೆಸುತ್ತಿದೆ. ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ 5 ಜನರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುವಳ್ಳೂರ್ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರು ಆಂಧ್ರಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…