Featured

ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಹಾಗೂ ಹಿಂದುತ್ವಕ್ಕೆ ದಕ್ಕೆಯಾಗಿದೆ : ಮುತಾಲಿಕ್ – Vishwanews24

ಕಾರ್ಕಳ ಶಾಸಕರ ವಿರುದ್ಧ ಬೇನಾಮಿ ಆಸ್ತಿ ಆರೋಪ: ಮತ್ತೊಂದು ದಾಖಲೆ ಬಿಡುಗಡೆ ಮಾಡಿದ ಮುತಾಲಿಕ್

ಕ್ರಮ ಕೈಗೊಳ್ಳಲು ಮೀನಮೇಷ ಎಣಿಸಿದರೆ ಲೋಕಯುಕ್ತ ಕಚೇರಿ ಮುಂದೆ ಧರಣಿ  ಮುತಾಲಿಕ್ ಎಚ್ಚರಿಕೆ

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ ಬಳಿಕ ಕ್ಷೇತ್ರದ ಶಾಸಕರ ವಿರುದ್ಧ ಬೇನಾಮಿ ಆಸ್ತಿ ಆರೋಪ ಮಾಡಿರುವ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಇದೀಗ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.71 ಎಕರೆ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಿದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಹೆಬ್ರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಹಾಗೂ ಹಿಂದುತ್ವಕ್ಕೆ ದಕ್ಕೆಯಾಗಿದೆ ಎಂದು ಮೂಲ ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯ ಮೇರೆಗೆ ಕಾರ್ಕಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಘೋಷಣೆ ಮಾಡಿದ್ದೇನೆ. ಅಕ್ರಮ ಸಕ್ರಮ ಕಾನೂನಿನ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾಗ ಮಂಜೂರು ಮಾಡಲಾಗಿದೆ. ಕಾರ್ಕಳದ ಶಾಸಕ ಸುನಿಲ್ ಕುಮಾರ ಅಧ್ಯಕ್ಷತೆಯ ಸಮಿತಿಯಲ್ಲಿ ಸುಮಾರು 2000 ಅರ್ಜಿಗಳು ಬಂದಿದ್ದರು ಸಹಾ ಅವುಗಳನ್ನು ತಿರಸ್ಕರಿಸಿ ಪ್ರಥಮ ದರ್ಜೆ ಗುತ್ತಿಗೆದಾರನಾದ ಅನಂತಕೃಷ್ಣ ಶೆಟ್ಟಿ ಅವರಿಗೆ ಅಕ್ರಮವಾಗಿ ಸರ್ವೆ ನಂ 341-1 ರಲ್ಲಿ 4.71 ಎಕ್ರೆ ಜಾಗವನ್ನು ಮಂಜೂರು ಮಾಡಲಾಗಿದೆ. ಇದನ್ನು ಎಷ್ಟು ಕಮೀಷನ್ ಪಡೆದು ಮಂಜೂರು ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ಉತ್ತರಿಸಲಿ. ಇದು ಜನಸಾಮಾನ್ಯರಿಗೆ ಮಾಡಿದ ದ್ರೋಹ ಇದನ್ನು ನಾನು ಖಂಡಿಸುತ್ತೇನೆ ಎಂದರು.

ಅಕ್ರಮ ಸಕ್ರಮ ಅರ್ಜಿ ಸಲ್ಲಿಸುವಾಗ ತಾನು ಪ್ರಥಮ ದರ್ಜೆ ಗುತ್ತಿಗೆದಾರನಾದರೂ ಕೂಡ ಈ ಅನಂತಕೃಷ್ಣ ಶೆಟ್ಟಿ ನಾನೊಬ್ಬ ಕೃಷಿಕ ಎಂದು ಸುಳ್ಳು ಹೇಳಿ ಒಬ್ಬ ಕೋಟ್ಯಾಧಿಪತಿ ಬಡವರ ಪಾಲಗಬೇಕಿದ್ದ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕ್ಕದಮೆ ಹೂಡಿ ಈ ಭೂಮಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹಾಗೂ ಈಗಾಗಲೇ ಒಂದು ಭೂ ಹಗರದ ದಾಖಲೆಯನ್ನು ಲೋಕಯುಕ್ತಕ್ಕೆ ಸಲ್ಲಿಸಿದ್ದು ಈ ಪ್ರಕಟವನ್ನೂ ಸಹಾ ಲೋಕಯುಕ್ತಕ್ಕೆ ದೂರು ನೀಡಲಾಗುತ್ತದೆ. ಕ್ರಮ ಕೈಗೊಳ್ಳಲು ಮೀನಮೇಷ ಎಣಿಸಿದರೆ ಲೋಕಯುಕ್ತ ಕಚೇರಿ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮಸೇನಾ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ನಾಯಕರಾದ ಹರೀಶ್ ಅಧಿಕಾರಿ, ಸುಧೀರ್ ಹೆಬ್ರಿ, ರಾಘವ್ ನಾಯಕ್ ಮುದ್ರಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

4 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago