Featured

ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ  “ಕೆಒಎ” ಪ್ರಶಸ್ತಿ ಪ್ರದಾನ – vishwanews24

ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ  “ಕೆಒಎ” ಪ್ರಶಸ್ತಿ ಪ್ರದಾನ

ಕಾರ್ಕಳ: ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ.

ರವಿವಾರ ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸಮ್ಮಾನಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆಯುಷ್ ಶೆಟ್ಟಿ, ಕಿರಿಯ ವಯಸ್ಸಿನಲ್ಲೇ ಬ್ಯಾಡ್ಮಿಂಟನ್ ಲೋಕದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪ್ರತಿಭೆಯಾಗಿದ್ದು, ಇತ್ತೀಚೆಗೆ ಯುಎಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿ ಚಾಂಪಿಯನ್ ಪಟ್ಟ ಪಡೆದಿದ್ದರು. ಆಯುಷ್ ಅವರು ಕಾರ್ಕಳ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಲಿ ದಂಪತಿ ಪುತ್ರ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago