ಕಾರ್ಕಳ: ಕುಕ್ಕುಂದೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿಯವರ ಅಮಾನತು ಆದೇಶವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿಂದಕ್ಕೆ ಪಡೆದಿದೆ. ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿರುವ ಹೆಚ್ಚುವರಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರನ್ನು ಆಹ್ವಾನ ಮಾಡಲಿಲ್ಲ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಸೆಪ್ಟೆಂಬರ್ 4ರಂದು ಇಲಾಖೆ ಅಮಾನತು ಮಾಡಿತ್ತು.
ಅಮಾನತು ಆದೇಶ ಬಳಿಕ ಪುನಃ ಈ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಇಂದು ಅವರನ್ನು ಮರಳಿ ಗೌರವ ಧನ ಸೇವೆಗೆ ತೆರಳಲು ಇಲಾಖೆ ಆದೇಶ ನೀಡಿದೆ.
ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿ ರುವ ಕೊಠಡಿಯ ಉದ್ಘಾಟನೆ ಅಂಗ ವಾಗಿ ಆ.28ರಂದು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ವತಿಯಿಂದ ಏರ್ಪಡಿಸಿರುವ ಗಣ ಹೋಮ ಹಾಗೂ ಹೆಚ್ಚುವರಿ ಕೊಠಡಿ ಉದ್ಘಾಟನೆ ಮಾಹಿತಿಯನ್ನು ಇಲಾಖೆ ಅಥವಾ ಸ್ಥಳೀಯ ಶಾಸಕರ ಗಮನಕ್ಕೆ ತಂದಿರಲಿಲ್ಲ.
ಕಾರ್ಯಕ್ರಮ ನಡೆದಿರುವ ಬಗ್ಗೆ ಸ್ಥಳೀಯರಿಂದ ಇಲಾಖೆಗೆ ತಿಳಿದು ಬಂದಿದ್ದು, ಇದು ಶಿಷ್ಟಾಚಾರ ಉಲ್ಲಂಘನೆ ಆಗಿರುತ್ತದೆ. ಇದಕ್ಕೆ ಸಂಬಂಧಿಸಿ ಜಯಂತಿನಗರ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಂಬಂಧಪಟ್ಟ ವಲಯ ಮೇಲ್ವಿಚಾರಕಿಗೆ ಕಾರಣ ಕೇಳಿ ಇಲಾಖೆಯಿಂದ ನೋಟೀಸು ನೀಡಲಾಗಿತ್ತು.
ಅಂಗನವಾಡಿ ಕಾರ್ಯಕರ್ತೆ ಮತ್ತು ವಲಯ ಮೇಲ್ವಿಚಾರಕಿ ನೋಟಿಸಿಗೆ ಸಮಜಾಯಿಷಿ ನೀಡಿದ್ದರು. ಸದರಿ ಅಂಗನವಾಡಿ ಕಾರ್ಯಕರ್ತೆಯ ಕರ್ತವ್ಯ ಲೋಪದ ಕುರಿತು ಕೈಗೊಳ್ಳಲು ಅಂಗನವಾಡಿ ಕಾರ್ಯ ಕರ್ತೆ, ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷೆ ಜಿಲ್ಲಾಧಿಕಾರಿ ಯವರು ಉಲ್ಲೇಖ (6)ರನ್ವಯ ಜಯಂತಿ ನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿ ಯವ ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…