Featured

ಕಾರ್ಕಳ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ; 200 ಕೆಜಿ ಗೂ ಅಧಿಕ ದನದ ಮಾಂಸ ಪತ್ತೆ – vishwanews24

ಕಾರ್ಕಳ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ; 200 ಕೆಜಿ ಗೂ ಅಧಿಕ ದನದ ಮಾಂಸ ಪತ್ತೆ

ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ರಪ್ ಆಲಿ ಎಂಬವನ ಮನೆಯಲ್ಲಿ ಅಕ್ರಮವಾಗಿ ದನಗಳನ್ನು ಕೂಡಿ ಹಾಕಿ ಕಡಿದು ಮಾಂಸ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಇವತ್ತು ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 200 kg ಮಾಂಸ ಪತ್ತೆಯಾಗಿದ್ದು ಪಕ್ಕದಲ್ಲಿ ಹೋರಿಯನ್ನು ಕಟ್ಟಿ ಹಾಕಿದ್ದು, ಅದಲ್ಲದೇ ಅಲ್ಲೇ ರಕ್ತದ ಕುರುಹು ಮತ್ತು ದನದ ತ್ಯಾಜ್ಯಗಳು ಪತ್ತೆಯಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೋಲಿಸರೊಂದಿಗೆ ಹಿಂದೂ ಸಂಘಟನೆ ಇಂದು ಬೆಳಗ್ಗೆ ದಾಳಿ ನಡೆಸಿದೆ.

ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ತಕ್ಷಣ ಅಶ್ರಪ್ ನನ್ನು ಬಂಧಿಸಬೇಕು, ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಅವನ ಮನೆಯನ್ನು ಹಾಗೂ ಗೋ ವಧೆಗೆ ಬಳಸಿಕೊಂಡಿರುವ ಎಲ್ಲಾ ಜಾಗವನ್ನು ಸರಕಾರ ಮುಟ್ಟುಗೋಲು ಹಾಕಬೇಕು. ಅಶ್ರಫ್ ಎನ್ನುವಾತ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು ಮುಂಬೈ ನಿಂದ ಗಡಿಪಾರು ಮಾಡಿದ ನಂತರ ಕಾರ್ಕಳದಲ್ಲಿ ನೆಲೆಸಿ ಇಲ್ಲಿಯೂ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರೆಸುತ್ತಾ ಬಂದಿರುತ್ತಾನೆ ಆದ್ದರಿಂದ ಪೋಲಿಸ್ ಇಲಾಖೆ ಈತನ ಮೇಲೆ ಅತ್ಯಂತ ಪ್ರಬಲ ಕಾನೂನು ಕ್ರಮ ಕೈಗೊಳ್ಳುವಂತೆ ಬಜರಂಗದಳ ಆಗ್ರಹಿಸಿದೆ

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

13 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

14 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

14 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

15 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

16 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

16 hours ago