ಉಡುಪಿ: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ನಿವಾಸಿ ಟಿ.ರವಿಚಂದ್ರ (55 ) ಹಾಗೂ ಆತನ ಮಗ ಪವನ್ ಕುಮಾರ್(31) ಬಂಧಿತ ಆರೋಪಿಗಳು. ಇವರು ಜ.21ರಂದು ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಕುರಿತ ಮಾಹಿತಿಯಂತೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸೀನ್ ಆಫ್ ಕ್ರೈಮ್ ಆಫೀಸರನ್ನು ಕರೆಸಿ ಸ್ಥಳ ಪರಿಶೀಲನೆ ನಡೆಸಿದ್ದು, ಅವರು ನೀಡಿದ ವರದಿಯಲ್ಲಿ, ಬಂಡೆ ಒಡೆಯಲು ಸ್ಪೋಟಕಗಳನ್ನು ಬಳಸಿರುವುದು ತಿಳಿಸಲಾಗಿದೆ. ಅದರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ👇
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…