ಕಾರ್ಕಳ: ಅತ್ತೂರು ಗ್ರಾಮದ ಪರ್ಪಲೆ ಗಿರಿಯಲ್ಲಿ ನವೆಂಬರ್ 26-28ರವರೆಗೆ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ -Vishwanews24

ಕಾರ್ಕಳ: ಅತ್ತೂರು ಗ್ರಾಮದ ಪರ್ಪಲೆ ಗಿರಿಯಲ್ಲಿ ನವೆಂಬರ್ 26-28ರವರೆಗೆ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ -Vishwanews24

ಕಾರ್ಕಳ: ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದ ಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆ ಕಾರ್ಕಳ ಮತ್ತು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇವರ ನೇತೃತ್ವದಲ್ಲಿ ನವೆಂಬರ್ 26-28ರವರೆಗೆ ಮೂರುದಿನ ಕಾರ್ಕಳ ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ ಆಯೋಜಿಸಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಕಾಶ್ ಕುಕ್ಕೆಹಳ್ಳಿ ತಿಳಿಸಿದರು.

ಅವರು ಮಂಗಳವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಕಳೆದ ಒಂದು ದಶಕದಿಂದ ಕರಾವಳಿ ಭಾಗದಲ್ಲಿ ದೇವಾಲಯದ ಜೀರ್ಣೋದ್ಧಾರದ ಸಂಕ್ರಮಣ ಕಾಲ ಆರಂಭವಾಗಿದೆ. ಆರಾಧನೆ ಅನುಷ್ಠಾನಗಳು ನಿಂತು ಹೋದ ಅನೇಕ ದೇವಸ್ಥಾನಗಳು ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿರುವುದನ್ನು ನಾವು ಕಂಡಿದ್ದೇವೆ. ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರಲು ಗ್ರಾಮಸ್ಥರು ಮುಂದಾಗಿದ್ದಾರೆ.

ಕಾರ್ಕಳ ನಗರ ಮತ್ತು ಅತ್ತೂರು ಸುತ್ತಮುತ್ತ ಹಲವಾರು ಕಡೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಂದಾದಾಗ ಈ ಕ್ಷೇತ್ರದ ಜೀರ್ಣೋದ್ಧಾರವನ್ನು ಮೊದಲು ಮಾಡತಕ್ಕದ್ದು ಎಂದು ಅಷ್ಟಮಂಗಲ ಪ್ರಶ್ನೆಗಳಲ್ಲಿ ಕಂಡು ಬಂದಿರುತ್ತದೆ. ಇಲ್ಲಿ ದೈವೀಶಕ್ತಿ ಗಳು ಚರಾವಸ್ಥೆಯಲ್ಲಿ ಇರುವುದರಿಂದ ಗ್ರಾಮಸ್ಥರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾದ ಉದಾಹರಣೆ ಇದೆ. ಸೂಕ್ತ ಮುಂದಾಳತ್ವ ಇಲ್ಲದ ಕಾರಣ ಈ ಜೀರ್ಣೋದ್ಧಾರ ಕಾರ್ಯಕ್ಕೆ ಯಾರೂ ಕೂಡ ಕೈಹಾಕಿರಲಿಲ್ಲ. ಈಗ ಈ ಭಗವತ್ ಕಾರ್ಯಕ್ಕೆ ಹಿಂದೂ ಜಾಗರಣ ವೇದಿಕೆ ಮುಂದಾಳತ್ವ ವಹಿಸಿ ಕೊಂಡಿದ್ದು, ಜಿಲ್ಲೆಯ ಆಸ್ತಿಕ ಭಕ್ತರ ಸಂಪೂರ್ಣ ಬೆಂಬಲ ಇದಕ್ಕೆ ಲಭಿಸಿದೆ.

ಬರುವ ಭಕ್ತಾದಿಗಳಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಕಾರ್ಕಳ ಬಸ್ ನಿಲ್ದಾಣದಿಂದ ಉಚಿತ ಬಸ್ಸಿನ ವ್ಯವಸ್ಥೆ ಇರುತ್ತದೆ ಎಂದರು.

ಸಾನಿಧ್ಯ ಪುನರ್ನಿರ್ಮಾಣ ನಿಮಿತ್ತ ಅತ್ತೂರು ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಆಯೋಜಿಸಲಾಗಿದ್ದು, ಕೇರಳದ ಪಯ್ಯನ್ನೂರಿನ ಖ್ಯಾತ ದೈವಜ್ಞ ರಾದ ಶ್ರೀ ನಾರಾಯಣ ಪೊದುವಾಲ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮೂರು ದಿನಗಳ ಪರ್ಯಂತ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆಗೆ ನಾಡಿನ ವಿವಿಧ ಭಾಗಗಳಿಂದ ಗಣ್ಯರು ಆಗಮಿಸಲಿದ್ದಾರೆ. ಈ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಾರ್ಕಳದ ಇತಿಹಾಸಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದ್ದು, ಹೀಗಾಗಿ ಈ ಕಾರ್ಯಕ್ರಮ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಸುದ್ದಿಗೋಷ್ಠೀಯಲ್ಲಿ ಅಧ್ಯಕ್ಷರು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇದರ ಪ್ರಶಾಂತ ನಾಯಕ್, ಗುರುಪ್ರಸಾದ್ ಶೆಟ್ಟಿ ನಾರಾವಿ, ತಾಲೂಕು ಕಾರ್ಯದರ್ಶಿಗಳು ಹಿಂದೂ ಜಾಗರಣ ವೇದಿಕೆ ಕಾರ್ಕಳ, ಮಹೇಶ್ ಬೈಲೂರು, ದಿನೇಶ್ ಶೆಟ್ಟಿ ಹೆಬ್ರಿ, ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

5 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago