ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್ ಡಿ’ಸೋಜಾ ಅವರು ತಿಳಿಸಿದರು.
ವಾರ್ಷಿಕ ಮಹೋತ್ಸವದಲ್ಲಿ 35 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ.
ಮಹೋತ್ಸವಕ್ಕೆ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಹಣ, ವಸ್ತುರೂಪದ ಹರಕೆ, ಮೋಂಬತ್ತಿ ಹರಕೆ ಸಲ್ಲಿಸಲು ಚರ್ಚ್‌ನ ಎಡಬದಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. 5 ಕಡೆಗಳಲ್ಲಿ ಕುಡಿಯುವ ನೀರು, 60 ಶೌಚಾಲಯ, ವಿವಿಧ ಭಾಗಗಳಿಂದ ಆಗಮಿಸುವವರಿಗೆ ಅಲ್ಲಲ್ಲಿ ಪಾರ್ಕಿಂಗ್, ಪಾಸ್ ಹೊಂದಿದವರಿಗೆ ಪರ್ಪಲೆಗುಡ್ಡೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಂಗಡಿ, ಸ್ಟಾಲ್‌ಗಳಲ್ಲಿ ದುಡಿಯುವ ಕಾರ್ಮಿಕರಿಗೆ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…