ಕಾರ್ಕಳ: ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತಗೊಂಡ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಇಂದು ಸಂಭವಿಸಿದೆ.
ಅನಾರೋಗ್ಯಕ್ಕೆ ತುತ್ತಾಗಿದ್ದ 65 ವರ್ಷ ಪ್ರಾಯದ ಭಾಗಿ ಎಂಬವರು ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಈ ಸಂದರ್ಭದಲ್ಲಿ ಆಕೆಯ ಮಗಳು 25 ವರ್ಷ ಪ್ರಾಯದ ರೇಖಾ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದಳು. ಅಂಗಡಿಯಲ್ಲಿದ್ದ ಆಕೆಗೆ ಪರಿಚಯಸ್ಥರೊಬ್ಬರು ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ, ಮನೆಗೆ ಬಾ ಎಂದು ಎಂದು ಹೇಳಿದ್ದರು.
ಅಸೌಖ್ಯದಿಂದ ಇದ್ದ ತಾಯಿಗೆ ಏನೋ ಆಗಿರ ಬೇಕು ಪ್ರಶ್ನೆಯ ನಡುವೆ ತಾಯಿ ಮೃತ ಪಟ್ಟಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಕೆಲಸದಿಂದ ಹಿಂತಿರುಗಿದ್ದ ರೇಖಾ ಮನೆಗೆ ಹೋಗುವ ಮುನ್ನವೇ ಮನೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಂದಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…