ಕಾರ್ಕಳ : ಅನಾರೋಗ್ಯದಿಂದ ಮನನೊಂದು ಕಾರ್ಕಳದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ ಕೊಠಡಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕುಂದಾಪುರದ ಕರಾವಳಿ ಶೀರೂರು ನಿವಾಸಿ ಸೀಮಾ ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾಭ್ಯಾಸದ ಸಲುವಾಗಿ ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸಮಾಡಿಕೊಂಡಿದ್ದ ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು.
ಈ ಬಗ್ಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಗುಣಮುಖವಾಗದೇ ಇದ್ದೂದರಿಂದ ಮನನೊಂದು 4-5 ತಿಂಗಳ ಹಿಂದೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಬಗ್ಗೆ ಇದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅದೇ ಕಾರಣದಿಂದ ಮನನೊಂದು ಫೆ.2 ರಂದು ಮಧ್ಯಾಹ್ನದಿಂದ ಸಂಜೆಯ ನಡುವಿನ ಅವಧಿಯಲ್ಲಿ ಹಾಸ್ಟೆಲ್ ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ತಾಯಿ ಶೀಲಾವತಿ ಶೆಡ್ಡಿ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…