Judge and gavel in courtroom
ಕಾರ್ಕಳ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ(34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಹಿಂದೆ ಪ್ರಕರಣ ದಾಖಲಾಗಿತ್ತು. ಬಾಲಕಿಯನ್ನು ಪರಿಚಯಿಸಿಕೊಂಡ ಆರೋಪಿ ಬಾಲಕಿ ಜತೆ ಮೊಬೈಲ್ ಸಂಪರ್ಕ ಇರಿಸಿಕೊಂಡಿದ್ದ. ಆಕೆಗೆ ಕರೆ ಮಾಡಿ ಜನವಸತಿ ಇಲ್ಲದ ಮನೆಗೆ ಮತ್ತು ಕಾಡಿಗೆ ಬರುವಂತೆ ಬೆದರಿಕೆ ಒಡ್ಡಿ ಕರೆಸಿಕೊಳ್ಳುತಿದ್ದ. ಬಾಲಕಿಯನ್ನು ಕಾಡಿಗೆ ಬರಹೇಳಿದ್ದ ಆತ ಆಕೆಯ ಜತೆ ಒತ್ತಾಯ ಪೂರ್ವಕವಾಗಿ ದೈಹಿಕ ಸಂಬಂಧ ಬೆಳೆಸಿದ್ದ. ತದನಂತರದಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು.
ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಆಕೆ ಗರ್ಭಿಣಿ ಎಂದು ತಿಳಿಸಿದ್ದರು. ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ 4 ಮಂದಿ ವಿರುದ್ಧ ಅಂದು ದೋಷಾರೋಪಣೆ ಸಲ್ಲಿಕೆಯಾಗಿತ್ತು. ಆಗಿನ ಸರ್ಕಲ್ ಇನ್ಸ್‌ಪೆಕ್ಟರ್ ನಾಗರಾಜ ಟಿ.ಡಿ. ತನಿಖೆ ನಡೆಸಿದ್ದರು. ಕಾರ್ಕಳ ಇನ್ಸ್‌ಪೆಕ್ಟರ್ ನಾಗೇಶ್ ಕೆ. ಅವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಒಟ್ಟು 45 ಸಾಕ್ಷಿಗಳ ಪೈಕಿ 26 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. 1ನೇ ಆರೋಪಿ ಚಂದ್ರಶೇಖರ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದ ಹಿನ್ನಲೆಯಲ್ಲಿ ಆತನಿಗೆ ಜೈಲು ಶಿಕ್ಷೆ, 21 ಸಾವಿರ ರೂ.ದಂಡ, ಸರಕಾರಕ್ಕೆ 6 ಸಾವಿರ ರೂ. ಸಂತ್ರಸ್ತೆಗೆ 15 ಸಾವಿರ ರೂ. ಹಾಗೂ ಸರಕಾರದಿಂದ ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿರುತ್ತಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…