Featured

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು – Vishwanews24

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.

ಇನ್ನು ಶಶಾಂಕ್‌ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ನಲ್ಲಿ ಭಾನುವಾರ ಬೆಳಗ್ಗೆ ಹೊರಟಿದ್ದರು. ಶಶಾಂಕ್‌ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

23 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

24 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

24 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

24 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago