ಕಾರ್ಕಳ: ಕಾರ್ಕಳದ ಮಹಿಳೆಯೊಬ್ಬರು ಆನ್ಲೈನ್ ವಂಚನೆ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ (38) ಇವರು ಜನವರಿ 7 ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬ್ರದಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿದ್ದಾನೆ.
ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ.
ನಂತರ ಸಂತ್ರಸ್ಥೆಯ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಿ, ಅಪಾದಿತರ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂಪಾಯಿ ಮತ್ತು ಯೆಸ್ ಬ್ಯಾಂಕ್ ಖಾತೆಗೆ ರೂಪಾಯಿ 10 ಲಕ್ಷ ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವಗಾ್ವಣೆ ಮಾಡಿಸಿಕೊಂಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…