ಕಾರ್ಕಳ : ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ -Vishwanews24
ಕಾರ್ಕಳ : ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ
ಸುರತ್ಕಲ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ.

ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸ ಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ..ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದರು.
ವರದಿ: ಸುರೇಶ್ ಎರ್ಮಾಳ್
