ಉಡುಪಿ: ಉದ್ಯಮಿ ದಿಲೀಪ್ ಎನ್ ಆರ್ ಅವರು ವಿಷವನ್ನು ಸೇವನೆ ಮಾಡಿ ತದನಂತರ ಲೈಸನ್ಸ್ ಇರುವ ಸರ್ವಿಸ್ ಪಿಸ್ತೂಲ್ ನಲ್ಲಿ ಎದೆಯ ಭಾಗಕ್ಕೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಉದ್ಯಮಿ ದಿಲೀಪ್ ಅವರ ಆತ್ಮಹತ್ಯೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಅನಯಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಮಂಗಳೂರಿನ ಉದ್ಯಮಿ ದಿಲೀಪ್ ಎನ್ ಆರ್ ಗೆ ಆರ್ಥಿಕ ನಷ್ಟವಾಗಿತ್ತು ಎಂಬ ಮಾಹಿತಿಯಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕುಟುಂಬದಿಂದ ಸಿಕ್ಕಿದೆ. ಆತ್ಮಹತ್ಯೆಗೆ ಮುನ್ನ ಕುಟುಂಬಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ರವಾನಿಸಿದ್ದಾರೆ. ಕುಟುಂಬಸ್ಥರು ರಾತ್ರಿಯೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಪೊಲೀಸರು ಕಾರನ್ನು ಹುಡುಕಿ ಪತ್ತೆ ಮಾಡಿದ್ದಾರೆ. ಕಾರ್ಕಳದ ನಿಟ್ಟೆ ಬಳಿ ಬೆಳಗಿನ ಜಾವ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ವಿಷದ ಬಾಟಲ್ ಮತ್ತು ಸರ್ವಿಸ್ ರಿವಾಲ್ವಾರ್ ಕಾರಿನೊಳಗೆ ಪತ್ತೆಯಾಗಿದೆ.ಅವರು ವಿಷವನ್ನು ಸೇವಿಸಿ ಬಳಿಕ ಸರ್ವಿಸ್ ಪಿಸ್ತೂಲ್ ನಲ್ಲಿ ಶೂಟ್ ಮಾಡಿಕೊಂಡಿರುತ್ತಾರೆ. ಈ ಸಂಬಂಧ ಕುಟುಂಬಿಕರು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ನಂತರ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…