ಕಾರ್ಕಳ: ಮಾಧ್ಯಮದ ಎದುರು ಹೇಳಲು ಸಾಧ್ಯವಿಲ್ಲ. ನಮ್ಮ ಅಭಿಪ್ರಾಯ ಆಲಿಸಲು ಪಕ್ಷದ ವರಿಷ್ಠರ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಕಾರ್ಕಳ ಶಾಸಕ, ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.
ತಮ್ಮ ಅಸಮಾಧಾನ ಮತ್ತು ಆಗ್ರಹವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಮುಖ್ಯಮಂತ್ರಿ ಬದಲಾಣೆ ಕುರಿತಂತೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿಯ ಬಹಳಷ್ಟು ಸಚಿವರು, ನಾಯಕರು ಸಿಎಂ ಬಿಎಸ್ ವೈ ಗೆ ಬೆಂಬಲವಾಗಿ ಮಾತನಾಡುತ್ತಿದ್ದಾರೆ. ಈ ಮಧ್ಯೆ ಸುನೀಲ್ ಕುಮಾರ್ ‘ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ’ ಎಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…