ಕಾರ್ಕಳ: ಇಲ್ಲಿನ ಒಂದೇ ಮನೆಯ ಹದಿನಾರು ಗೋವನ್ನು ಕಳೆದುಕೊಂಡ ಯಶೋಧ ಆಚಾರ್ಯ ಅವರಿಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ವಿಶ್ವಹಿಂದೂಪರಿಷತ್ ಬಜರಂಗದಳ ಗೋದಾನ ಮಾಡಿದರು.
ಮೊನ್ನೆ ಯಶೋಧ ಆಚಾರ್ಯ ಮನೆಗೆ ಭೇಟಿ ನೀಡಿ ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿ ಹಾಗೂ ಕಾರ್ಕಳ ಯುವ ಕಾಂಗ್ರೆಸ್ ತಂಡ ಅವರನ್ನು ಸಂತೈಸಿದೆ.
ಅಲ್ಲದೆ ಈ ಕೂಡಲೆ ಸರಕಾರದಿಂದ 5 ಲಕ್ಷ ರೂ ಪರಿಹಾರವನ್ನು ದೊರಕಿಸಿಕೊಡುವಂತೆ ಸ್ಥಳೀಯ ಶಾಸಕ ಸಚಿವ ಸುನಿಲ್ ಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ.
ಸಚಿವ ವಿ.ಸುನೀಲ್‌ಕುಮಾರ್ ಮಂಗಳವಾರದಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗೋವುಗಳನ್ನು ದಾನ ರೂಪದಲ್ಲಿ ನೀಡಿ, ಯಶೋಧಾ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.
ಈ ನಡುವೆ ವಿಶ್ವಹಿಂದುಪರಿಷತ್ ಮುಖಂಡ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್, ಬಜರಂಗದಳ ರಾಜ್ಯ ಸಂಚಾಲಕ ಸುನೀಲ್ ಕೆ.ಆರ್. ನೇತೃತ್ವದಲ್ಲಿ ಕಾರ್ಯಕರ್ತರು ಯಶೋಧಾ ಅವರ ಮನೆಗೆ ತೆರಳಿ ದನಗಳನ್ನು ದಾನಮಾಡಿ, ಆತ್ಮವಿಶ್ವಾಸ ಮೂಡಿಸಿದ್ದಾರೆ.
ಒಂದು ಗೋವನ್ನು ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ ಇನ್ನಾ, ಕಾಂಗ್ರೇಸ್ ಮುಖಂಡರಾದ ತಾರಾನಾಥ ಕೋಟ್ಯಾನ್, ಪ್ರದೀಪ್ ಬೇಲಾಡಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…