Featured

ಕಾರ್ಕಳ: ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಲ್ಲ :  ಶುಭದರಾವ್ ವ್ಯಂಗ್ಯ – vishwanews24

ಕಾರ್ಕಳ: ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಲ್ಲ :  ಶುಭದರಾವ್ ವ್ಯಂಗ್ಯ

ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ, ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ, ಆ ಹೆಚ್ಚುವರಿ ಹಾಲಿಗೆ ಎರಡು ರೂ ಹೆಚ್ಚುವರಿಯಾಗಿ ಪಡೆಯಲಾಗುತ್ತದೆಯೇ ವಿನಃ ಬೆಲೆ ಏರಿಸಿಲ್ಲ ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ ವಿನಹ ಯಾರಿಗೂ ಹೊರೆಯಾಗಿಲ್ಲ, ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ ಆದರೂ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನ ಎಂದು ಹೇಳಿದ್ದಾರೆ.

ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನ ಮಂತ್ರಿಗಳ ತವರು ಗುಜರಾತಿನಲ್ಲಿ ಅತೀ ಹೆಚ್ಚಾಗಿದೆ ಈ ಬಗ್ಗೆ ಬಿಜೆಪಿ ಪ್ರತಿಭಟನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಆಹಾರ ಕಿಟ್ಟ್ ನೀಡದೆ ಫಲಾನುಭವಿಗಳ ಪಟ್ಟಿ ಮಾಡುವುದು, ಅನುದಾನ ಬಿಡುಗಡೆಯಾಗದೆ ಗುದ್ದಲಿ‌ ಪೂಜೆ ಮಾಡುವುದು, ಕಾಮಗಾರಿ ಕಳಪೆಯಾದರೂ ಬಿಲ್ಲ್ ಪಾವತಿಸುವುದು. ಇದು ನಮ್ಮ ಶಾಸಕರ ವಿಶೇಷತೆ, ಈ ಬಾರಿ ಹಾಲಿಲ್ಲದ ಚಾಹ ಮಾಡುವುದು ಅದೇ ಪಟ್ಟಿಗೆ ಸೇರಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago