ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ : ಸಿದ್ದರಾಮಯ್ಯ -Vishwanews24
ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ : ಸಿದ್ದರಾಮಯ್ಯ -Vishwanews24
ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಪೊಲೀಸರು ಬಿಜೆಪಿ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ. ಬಿಜೆಪಿ ಕುಮ್ಮಕ್ಕಿನಿಂದ ಕಾರ್ಕಳದ ನಮ್ಮ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಅನಾರೋಗ್ಯವನ್ನೂ ಲೆಕ್ಕಿಸದೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪೊಲೀಸರನ್ನು ಕೊಡಲೇ ಅಮಾನತುಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.
