ಕಾರ್ಕಳ : ಭಾರತೀಯ ಜನತಾ ಪಕ್ಷದ ಸಿದ್ದಾಂತ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಆಡಳಿತ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾನ್ಬೆಟ್ಟು ಬಡ್ತನಬೈಲು ಮಾನಸ್ ನಾಯ್ಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಸಚಿವ ವಿ. ಸುನೀಲ್ ಕುಮಾರ್ ಅವರು ಪಕ್ಷದ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರವಾದ ನಾಯಕತ್ವ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರ ಆಡಳಿತ ಮತ್ತು ಸಚಿವ ವಿ. ಸುನೀಲ್ ಕುಮಾರ್ ಅವರ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ತಾನು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಮಾನಸ್ ನಾಯ್ಕ ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಯುವಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…