ಜಿಲ್ಲೆ

ಕಾರ್ಕಳ ಕಾಂಗ್ರೆಸ್ ಟಿಕೆಟ್ ಹಗ್ಗಜಗ್ಗಾಟ ಭಂಡಾರಿ ಕೊಡೆನು, ಮುನಿಯಾಲ್ ಬಿಡೆನು : ಮುನಿಯಾಲ್ ಬೆಂಬಲಿಗರಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ,ನಾಳೆಯೊಳಗೆ ಕೆಪಿಸಿಸಿ ಗೆ ಮುಟ್ಟಿಸುವ ಭರವಸೆ : ತೋನ್ಸೆ

ಕಾರ್ಕಳ ; ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಉದಯಕುಮಾರ್ ಶೆಟ್ಟಿ ಮುನಿಯಾಲು ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿ ಮಾಜಿ ಶಾಸಕ ಗೋಪಾಲ ಭಂಡಾರಿ ಕೈಸೇರಿರುವುದಕ್ಕೆ ಉದಯಕುಮಾರ್ ಶೆಟ್ಟಿ ಬೆಂಬಲಿಗರು ಇತ್ತೀಚೆಗಷ್ಟೇ ಎರಡು ದಿನಗಳ ಕಾಲ ಕಾರ್ಕಳ ನಗರ ಹಾಗೂ ಹೆಬ್ರಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದ ಬಳಿಕವೂ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಗೋಪಾಲ ಭಂಡಾರಿಯವರ ಮನೆಗೂ ತೆರಳಿದ ಉದಯಕುಮಾರ್ ಶೆಟ್ಟಿ ಬೆಂಬಲಿಗರು ಗೋಪಾಲ ಭಂಡಾರಿಯವರಿಗೆ ಚುನಾವಣೆಯಿಂದ ಹಿಂದೆ ಸರಿಯಿರಿ ಎಂಬ ಒತ್ತಡವನ್ನೂ ಹೇರಿದ್ರು ಆದ್ರೂ ಅದು ಸಫಲವಾಗದ ಹಿನ್ನಲೆಯಲ್ಲಿ ಇದೀಗ ಉಡುಪಿಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆಯನ್ನೂ ಹಾಕಲಾಯಿತು.

 ಹೇಗಾದ್ರೂ ಉದಯಕುಮಾರ್ ಶೆಟ್ಟಿವರಿಗೆ ಈ ಬಾರಿ ಟಿಕೆಟ್ ಸಿಗಬೇಕು ಎಂದು ಹಠಕ್ಕೆ ಬಿದ್ದಿರುವ ಉದಯ್ ಬೆಂಬಲಿಗರು ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ನಮ್ಮ ಬೆಂಬಲ ಉದಯಕುಮಾರ್ ಶೆಟ್ಟಿಯವರಿಗೆ ಎಂಬಂತೆ ಸಹಿ ಸಂಗ್ರಹ ಮಾಡಿ ಉದಯಕುಮಾರ್ ಶೆಟ್ಟಿಯವರಿಗೆ ಬಿಫಾರಂ ನೀಡುವಂತೆ ಒತ್ತಾಯಿಸಿ ಜಿಲ್ಲಾಧ್ಯಕ್ಷ ಜನಾರ್ಧನ ತೋನ್ಸೆಯವರಿಗೆ ಮನವಿ ಸಲ್ಲಿಸಲಾಯಿತು. ಅಲ್ಲದೆ ಒಂದು ವೇಳೆ ಪಕ್ಷ ಉದಯ ಕುಮಾರ್ ಶೆಟ್ಟಿಯವರಿಗೆ ಬಿಫಾರಂ ನೀಡದೇ ಇದ್ದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉದಯಕುಮಾರ್ ಅವರನ್ನು ನಿಲ್ಲಿಸಲಾಗುವುದು ಎಂಬ ಎಚ್ಚರಿಕೆಯನ್ನು ಬೆಂಬಲಿಗರು ನೀಡಿದ್ದಾರೆ.

 ಇನ್ನು ಕಾರ್ಯಕರ್ತರ ಮುತ್ತಿಗೆ ಘಟನೆಗೆ ಸಂಬಂಧಿಸಿದಂತೆ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ಧನ ತೋನ್ಸೆ ಮಾತನಾಡಿ, ಕಾರ್ಯಕರ್ತರು ಉದಯಕುಮಾರ್ ಅವರನ್ನೇ ಅಭ್ಯರ್ಥಿ ಮಾಡಿ, ಉದಯಕುಮಾರ್ ಅವರಿಗೆ ಬಿಫಾರಂ ಕೊಡಿ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಈ ಮನವಿಯನ್ನು ಕೆಪಿಸಿಸಿ ಗೆ ಕಳುಹಿಸಲಾಗುವುದು ಸಚಿವ ರಮಾನಾಥ ರೈ ಕೂಡ ಉದಯಕುಮಾರ್ ಹಾಗೂ ಅವರ ಬೆಂಬಲಿಗರನ್ನು ಸಮಾಧಾನ ಪಡಿಸಲಿದ್ದಾರರ, ಉದಯಕುಮಾರ್ ಅವರು ಬಂಡಾಯ ಆಗ್ಲಿ, ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದಿಲ್ಲ ಎಂಬ ಭರವಸೆ ಇದೆ ಎಂದ್ರು.

 

 ಗೋಪಾಲ ಭಂಡಾರಿ ಕಣ್ಣೀರಿಟ್ಟ ಘಟನೆಗೆ ಉದಯಕುಮಾರ್ ಶೆಟ್ಟಿ ಬೆಂಬಲಿಗ ತಾರನಾಥ್ ಕೂಡ, ಪ್ರತಿಕ್ರಿಯೆ ನೀಡಿದ್ದಾರೆ, ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ತಾರನಾಥ್, ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾಪಂಚಾಯತ್, ಎಪಿಎಂಸಿ ನಲ್ಲಿ ಕಾಂಗ್ರೆಸ್ ಸೋತಾಗ ಕಣ್ಣೀರು ಬಂದಿಲ್ಲ, ಸೋತರೂ ಕಾರ್ಯಕರ್ತರ ಸಭೆ ಮಾಡಿಲ್ಲ, ಕಾರ್ಯಕರ್ತರ ಮನಸ್ಸಿನ ನೋವು ಕೇಳದ ಗೋಪಾಲ ಭಂಡಾರಿ ಅಳುವ ಸನ್ನಿವೇಶ ಇಲ್ಲ, ನಾವು ಯಾವ ಬೆದರಿಕೆ ಹಾಕಿಲ್ಲ, ಪರ್ಯಾಯ ನಾಯಕ ಇದ್ದಾಗ ಅವಕಾಶ ಕೊಡಿ ಎಂದು ಕೇಳಿದ್ದೇವೆ, ದಾಕ್ಷಿಣ್ಯ ಸೃಷ್ಟಿ ಮಾಡಲು ಕಣ್ಣೀರಾಕಿದ್ದಾರೆ ಹೊರತು ಕಾರ್ಯಕರ್ತರ ಒಲವಿಗಾಗಿ ಅಲ್ಲ ಎಂದು ತಿರುಗೇಟು ನೀಡಿದ್ರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago