ಉಡುಪಿ: ಕಾರ್ಕಳದಲ್ಲಿ ಕಾಂಗ್ರೆಸ್ ಭಿನ್ನಮತ ಭುಗಿಲೆದ್ದಿದೆ. ಕಾರ್ಕಳದಿಂದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರು ಸಿಡಿದೆದ್ದಿದ್ದಾರೆ.
ಎಐಸಿಸಿ ಪಟ್ಟಿಯಲ್ಲಿ ಕಾರ್ಕಳದಿಂದ ಗೋಪಾಲ ಭಂಡಾರಿಗೆ ಟಿಕೆಟ್ ಘೋಷಣೆಯಾಗಿದೆ. ಮುನಿಯಾಲು ಉದಯ ಶೆಟ್ಟಿ ಬೆಂಬಲಿಗರು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಕಾರ್ಕಳದ ತಾಲೂಕು ಕಚೇರಿಯಲ್ಲಿ ಶೆಟ್ಟಿ ಬೆಂಬಲಿಗರು ಮೊಯ್ಲಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದೆ ತೀರ್ಮಾನ ಮಾಡುವುದಾಗಿ ಉದಯಕುಮಾರ್ ಶೆಟ್ಟಿ ಮುನಿಯಾಲು ವಿಶ್ವ ನ್ಯೂಸ್24 ಜೊತೆ ಮಾತನಾಡುತ್ತಾ ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವಂತೆ ಶೆಟ್ಟಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಮೊಯ್ಲಿ ಪುತ್ರ ಹರ್ಷ ಮೊಯ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಮೊಯ್ಲಿ ತನ್ನ ಪವರ್ ಬಳಸಿ ಉದಯ ಶೆಟ್ಟಿಗೆ ಟಿಕೆಟ್ ತಪ್ಪಿಸಿ ತಮ್ಮ ಶಿಷ್ಯ ಗೋಪಾಲ ಭಂಡಾರಿಗೆ ಟಿಕೆಟ್ ಕೊಡಿಸಿದ್ದಾರೆ ಎಂಬೂದು ಸದ್ಯದ ಆರೋಪವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…