Featured

ಕಾರ್ಕಳ: ಕಾಂಗ್ರೆಸ್ ಸರಕಾರದ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ಹೋರಾಟ ನಡೆಸುವ ಅನಿವಾರ್ಯ ಎದುರಾಗಿದೆ : ಶಾಸಕ ವಿ.ಸುನೀಲ್‌ಕುಮಾರ್ – vishwanews24

ಕಾರ್ಕಳ: ಕಾಂಗ್ರೆಸ್ ಸರಕಾರದ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ಹೋರಾಟ ನಡೆಸುವ ಅನಿವಾರ್ಯ ಎದುರಾಗಿದೆ : ಶಾಸಕ ವಿ.ಸುನೀಲ್‌ಕುಮಾರ್

ಕಾರ್ಕಳ,: “ರಾಜ್ಯದಲ್ಲಿ ಪ್ರತಿದಿನ ಸಮಸ್ಸೆಗಳು ಉಲ್ಬಣವಾಗುತ್ತಿದ್ದು, ಜನಹಿತವನ್ನು ಕಡೆಕಣಿಸಿ ಅಭಿವೃದ್ಧಿ ಚಟುವಟಿಕೆಗಳು ಮರೀಚಿಕೆಯಾಗಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನಸಭಾ ಒಳಗೆ ಮಾತ್ರವಲ್ಲ ಗ್ರಾಮ ಗ್ರಾಮಗಳಲ್ಲಿ ಹೋರಾಟ ನಡೆಸುವ ಅನಿವಾರ್ಯ ಎದುರಾಗಿದೆ” ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮುಂದೆ ಧರಣಿ ಸತ್ಯಾಗ್ರಹವನ್ನು ಬಿಜೆಪಿ ಆಯೋಜಿಸಿದ್ದು, ಅದರ ಅಂಗವಾಗಿ ಕಾರ್ಕಳ ವಿಸ್ತೃತ ಬಸ್ ನಿಲ್ದಾಣ ಮುಂಭಾಗದಲ್ಲಿ ಆಯೋಜಿಸಿದ ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಅವರು ಮಾತನಾಡಿಸಿದರು.
“ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದಾಗಿ ನಿರ್ಮಾಣವಾಗಿರುವ 9/11 ಸಮಸ್ಯೆಗೆ ಶ್ವಾಶತ ಪರಿಹಾರ ಆಗಬೇಕು. ಗ್ರಾಮ ಪಂಚಾಯತ್‌ಗಳಲ್ಲಿ ಸಾವಿರಾರು ಅರ್ಜಿಗಳು ಧೂಳು ಹಿಡಿಯುತ್ತಲಿದ್ದು, ಜನಸಾಮಾನ್ಯರಿಗೆ ವಾಸ್ತವ್ಯದ ಮನೆ ನಿರ್ಮಿಸಲು ವಿನ್ಯಾಸದ ನಕ್ಷೆಗೆ ಪ್ರಾಧಿಕಾರಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಪ್ರತಿ ಗ್ರಾಮ ಪಂಚಾತಿಗಳಿಗೆ ಕನಿಷ್ಠ ೧೦೦ ಮನೆಗಳನ್ನು ಕೊಟ್ಟಿದ್ದು, ಈಗ ಕಾಂಗ್ರೆಸ್ ಸರ್ಕಾರದ 2 ವರ್ಷ ಅವಧಿಯಲ್ಲಿ ಒಂದೇ ಒಂದು ಆಶ್ರಯ ಮನೆಯನ್ನು ಈ ವರೆಗೆ ಕೊಟ್ಟಿಲ್ಲ ಎಂದು ಆರೋಪಿಸಿದರು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರರ್ಕಾರವು ಅನುಷ್ಠಾನಕ್ಕೆ ತಂದಿದ್ದ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈಗಾಗಲೇ ಸುಮಾರು 23 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಅನರ್ಹಗೊಳಿಸಲು ಸುತ್ತೊಲೆ ಹೊರಡಿಸಿದೆ ಎಂಬ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಬಹಿರಂಗ ಪಡಿಸಿದರು.
ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಕಾರ್ಕಳ ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್, ಕಾರ್ಕಳ ಪುರಸಭಾ ಮಾಜಿ ಉಪಾಧ್ಯಕ್ಷ ಗಿರಿಧರ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಉದ್ಯಮಿ ನಿತ್ಯಾನಂದ ಪೈ ಮೊದಲಾದವರು ಸಂದಭೋಚಿತವಾಗಿ ಮಾತನಾಡಿ ರಾಜ್ಯ ಸರಕಾರದ ನಿಲುವನ್ನು ಖಂಡಿಸಿದರು.
9/11 ನಮೂನೆ ಸಮಸ್ಯೆ, ಆಶ್ರಯ ಮನೆ, ಅಕ್ರಮ-ಸಕ್ರಮ ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಯೋಜನೆ,ಸಂಧ್ಯಾ ಸುರಕ್ಷಾ ಯೋಜನೆ, ನಿರಂತರವಾಗಿ ಏರಿಸಲಾಗುತ್ತಿರುವ ವಿದ್ಯುತ್ ಬೆಲೆಯನ್ನು ಇಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago