ಕಾರ್ಕಳ: ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ನವೀನ್ ಚಂದ್ರ ಮೂಲ್ಯ (45) ಮೃತಪಟ್ಟ ಸವಾರ. ಅವರ ಮಗಳು ಪ್ರೇರಣಾ ಮೂಲ್ಯ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಟ್ಟೆ ಸಮೀಪದ ಬಜಕಳ ನಿವಾಸಿ ನವೀನ್ ಚಂದ್ರ ಅವರು ತನ್ನ ಮಗಳು ಪ್ರೇರಣಾ ಅವರನ್ನು ಸಿಇಟಿ ಪರೀಕ್ಷೆ ಬರೆಯಿಸಿ ಬೈಕ್‌ನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು.
ಇದನ್ನೂ ಓದಿ:
ಈ ವೇಳೆ ಕಾರ್ಕಳದಿಂದ ನಿಟ್ಟೆ ಕಡೆಗೆ ಅತಿವೇಗವಾಗಿ ಬಂದ ಕಾರು ಇವರ ಬೈಕ್‌ಗೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿತ್ತು. ತತ್‌ಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ನವೀನ್ ಚಂದ್ರ ಅವರು ಮೃತಪಟ್ಟಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿಯ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ದೂರಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…