ಕಾರ್ಕಳ : ಕುಡಿದ ಮತ್ತಿನಲ್ಲಿ ಮಗನಿಗೆ ಚಾಕುವಿನಿಂದ ಇರಿದು ಕೊಂದ ತಂದೆ -Vishwanews24

Featured, ಉಡುಪಿ

ಕಾರ್ಕಳ:ಕುಡಿದ ಮತ್ತಿನಲ್ಲಿ ತಂದೆ ಹಾಗೂ‌ ಮಗನ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸ್ವತಃ ತಂದೆಯೆ ಕುಡಿದ ಮತ್ತಿನಲ್ಲಿ ಮಗನಿಗೆ ಚೂರಿ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಕೊಲೆಯಾದ ಯುವಕನಾಗಿದ್ದಾನೆ. ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ತನ್ನ ಸ್ವಂತ ಮಗನಿಗೆ ಚೂರಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬಳಿಕ ವಿವಿಯನ್ ನ ಸಹೋದರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಮುಂಬೈಯಲ್ಲಿ ಕಾಲ್ ಸೆಂಟರ್ ನಲ್ಲಿ ಉದ್ಯೋಗಿಯಾಗಿದ್ದ ವಿವಿಯನ್ 3 ತಿಂಗಳಿನ ಹಿಂದೆ ಊರಿಗೆ ಬಂದಿದ್ದ. ಇಂದು ತಂದೆ ಮಗ ಒಟ್ಟಿಗೆ ಕುಡಿದು ಯಾವುದೊ ವಿಷಯಕ್ಕೆ ಗಲಾಟೆಯಾಗಿ ತಂದೆ ಮಗನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸ್ ತಿಳಿಸಿದ್ದಾರೆ.ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.