ಕಾರ್ಕಳ:ಕುಡಿದ ಮತ್ತಿನಲ್ಲಿ ತಂದೆ ಹಾಗೂ ಮಗನ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸ್ವತಃ ತಂದೆಯೆ ಕುಡಿದ ಮತ್ತಿನಲ್ಲಿ ಮಗನಿಗೆ ಚೂರಿ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಕೊಲೆಯಾದ ಯುವಕನಾಗಿದ್ದಾನೆ. ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ತನ್ನ ಸ್ವಂತ ಮಗನಿಗೆ ಚೂರಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ವಿವಿಯನ್ ನ ಸಹೋದರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈಯಲ್ಲಿ ಕಾಲ್ ಸೆಂಟರ್ ನಲ್ಲಿ ಉದ್ಯೋಗಿಯಾಗಿದ್ದ ವಿವಿಯನ್ 3 ತಿಂಗಳಿನ ಹಿಂದೆ ಊರಿಗೆ ಬಂದಿದ್ದ. ಇಂದು ತಂದೆ ಮಗ ಒಟ್ಟಿಗೆ ಕುಡಿದು ಯಾವುದೊ ವಿಷಯಕ್ಕೆ ಗಲಾಟೆಯಾಗಿ ತಂದೆ ಮಗನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸ್ ತಿಳಿಸಿದ್ದಾರೆ.ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…