ಕಾರ್ಕಳ: ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಉಡುಪಿಯ ಟೂರಿಸ್ಟ್ ವಾಹನವೊಂದು (ಟಿಟಿ) ಹೊತ್ತಿ ಉರಿದ ಘಟನೆ ಶನಿವಾರ (ಡಿ.14) ಸಂಭವಿಸಿದೆ.
ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ.
ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.
ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…