ಮುಂಡ್ಕೂರು : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‌ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.
ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ: ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…