ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ಸೇರಿದಂತೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣಾ ವ್ಯಾಪ್ತಿಯ ಶಿರ್ಲಾಲು ಗ್ರಾಮದ ಮದೆಲ್ಕಡಿ ಸಮೀಪ ಉಬ್ರೇಲುಗುಂಡಿ ಎಂಬಲ್ಲಿ ಮೇ 19ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬಜಗೋಳಿ ಸಮೀಪದ ಕೆರುವಾಶೆ ನಿವಾಸಿ ಹರೀಶ್ ಪೂಜಾರಿ ಹಾಗೂ ಹರಿಣಿ ದಂಪತಿ ಪುತ್ರ ರಿತೇಶ್(18) ಮತ್ತು ಹರಿಣಿ ಅವರ ಅಣ್ಣ ಶಿರ್ಲಾಲು ನಿವಾಸಿ ಹರೀಶ್ ಪುಜಾರಿ(48) ಎಂದು ಗುರುತಿಸಲಾಗಿದೆ. ಹರಿಣಿ, ತನ್ನ ಮಕ್ಕಳಿಗೆ ಶಾಲೆ ರಜೆಯ ಹಿನ್ನೆಲೆಯಲ್ಲಿ ಶಿರ್ಲಾಲುವಿನಲ್ಲಿರುವ ತನ್ನ ತವರು ಮನೆಗೆ ಬಂದಿದ್ದರು.
ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಹರಿಣಿ, ರಿತೇಶ್ ಹಾಗೂ ಹರೀಶ್ ಮನೆ ಸಮೀಪದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಸರಿಯಾಗಿ ಈಜು ಬಾರದ ರಿತೇಶ್ ಮೀನಿನ ಬಲೆ ಹಿಡಿದುಕೊಂಡು ಕೆರೆಯ ಮಧ್ಯ ಭಾಗಕ್ಕೆ ಹೋದನು. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಬಂದಿರುವುದರಿಂದ ಕೆರೆಯಲ್ಲಿ ನೀರು ಹೆಚ್ಚಾಗಿದ್ದು, ಇದರಿಂದ ಕೆರೆಯಲ್ಲಿ ಬಲೆ ಹಾಕುತ್ತಿದ್ದ ರಿತೇಶ್ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾನೆ ಎನ್ನಲಾಗಿದೆ.
ಇದನ್ನು ಕಂಡ ಹರೀಶ್ ಪೂಜಾರಿ, ರಿತೇಶ್ನನ್ನು ರಕ್ಷಿಸಲು ನೀರಿಗೆ ಇಳಿದರು. ಮಳೆಯಿಂದ ಕೆರೆಯಲ್ಲಿ ನೀರು ಹೆಚ್ಚು ಇದ್ದುದರಿಂದ ಇಬ್ಬರೂ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿ ಹರಿಣಿ ಅವರ ಕಣ್ಣೇದುರೇ ಮಗ ಮತ್ತು ತಮ್ಮ ಪ್ರಾಣ ಕಳೆದುಕೊಂಡರು. ಕೂಡಲೇ ಮಾಹಿತಿ ತಿಳಿದು ಆಗಮಿಸಿದ ಸ್ಥಳೀಯರು ಮೃತದೇಹವನ್ನು ಮೇಲಕ್ಕೆ ಎತ್ತಿದರು.
ಕಾರ್ಕಳದ ಕ್ರಿಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆತ ಉತ್ತೀರ್ಣನಾಗಿದ್ದನು. ಹರೀಶ್ ಪೂಜಾರಿಯವರು ಸ್ಥಳೀಯವಾಗಿ ಕೂಲಿ ಕೆಲಸ ಮಾಡಿ ಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…