ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ.
ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನ ರಸ್ತೆ ಬಲಭಾಗಕ್ಕೆ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಹುಬ್ಬಳ್ಳಿಯ ಹಾನಗಲ್ ಗೆ ಸಾಗುತ್ತಿದ್ದ ವಾಹನದ ಚಾಲಕನಿಗೆ ಮುಂಜಾನೆ ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳುವಿಗೆ ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ 108 ಸಿಬ್ಬಂದಿಗಳಾದ ಸ್ಟಾಫ್ ನರ್ಸ್ ದೇವಿಕಾ ಹಾಗೂ ಪೈಲಟ್ ಕಿಶೋರ್ ಕುಮಾರ್ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…