ಕಾರ್ಕಳ  : ಗೆಳೆಯರಿಂದ ಖಾಸಗಿ ವಿಡಿಯೋ ವೈರಲ್ ಬೆದರಿಕೆ ;  ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ – vishwanews24

Featured, ಉಡುಪಿ

ಕಾರ್ಕಳ  : ಗೆಳೆಯರಿಂದ ಖಾಸಗಿ ವಿಡಿಯೋ ವೈರಲ್ ಬೆದರಿಕೆ ;  ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ಕಾರ್ಕಳ : ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರ ಬ್ಲಾಕ್‌ಮೇಲ್‌ಗೆ ನೊಂದ ಯುವಕನೋರ್ವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಕ್ಟೋಬರ್ 9ರಂದು ಸಂಜೆ ಬೆಳ್ಮಣ್‌ನ ಸೂರಜ್‌ ಲಾಡ್ಜ್‌ನಲ್ಲಿ ಸಂಭವಿಸಿದೆ. ಮೃತರನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಎಂದು ಗುರುತಿಸಲಾಗಿದೆ.

ಅಭಿಷೇಕ್ ಆಚಾರ್ಯ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದ. ಇವರಿಬ್ಬರು ಜೊತೆಗಿರುವ ಖಾಸಗಿ ವೀಡಿಯೋವನ್ನು ವೈರಲ್‌ ಮಾಡುವುದಾಗಿ ಅಭಿಷೇಕ್ ಆಚಾರ್ಯನ ಗೆಳೆಯರು ಬ್ಲಾಕ್‌ಮೇಲ್‌ ಮಾಡುತ್ತಿದ್ದು, ಇದರಿಂದ ಮಾನಸಿಕವಾಗಿ ನೊಂದ ಅಭಿಷೇಕ್‌ ಬ್ಲಾಕ್ ಮೇಲ್ ಮಾಡುತ್ತಿದ್ದ ನಾಲ್ವರು ಯುವಕರ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ಹಾಗೂ ಆತನ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

Leave a Reply