ಕಾರ್ಕಳ : ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರ ಬ್ಲಾಕ್‌ಮೇಲ್‌ಗೆ ನೊಂದ ಯುವಕನೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಕ್ಟೋಬರ್ 9ರಂದು ಸಂಜೆ ಬೆಳ್ಮಣ್‌ನ ಸೂರಜ್ ಲಾಡ್ಜ್‌ನಲ್ಲಿ ಸಂಭವಿಸಿದೆ. ಮೃತರನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಎಂದು ಗುರುತಿಸಲಾಗಿದೆ.
ಅಭಿಷೇಕ್ ಆಚಾರ್ಯ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದ. ಇವರಿಬ್ಬರು ಜೊತೆಗಿರುವ ಖಾಸಗಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಅಭಿಷೇಕ್ ಆಚಾರ್ಯನ ಗೆಳೆಯರು ಬ್ಲಾಕ್‌ಮೇಲ್ ಮಾಡುತ್ತಿದ್ದು, ಇದರಿಂದ ಮಾನಸಿಕವಾಗಿ ನೊಂದ ಅಭಿಷೇಕ್ ಬ್ಲಾಕ್ ಮೇಲ್ ಮಾಡುತ್ತಿದ್ದ ನಾಲ್ವರು ಯುವಕರ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ಹಾಗೂ ಆತನ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…