ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಮೀನು ಸಾಗಾಟದ ಲಾರಿ : ಇಬ್ಬರಿಗೆ ಗಂಭೀರ ಗಾಯ – Vishwanews24
ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಮೀನು ಸಾಗಾಟದ ಲಾರಿ : ಇಬ್ಬರಿಗೆ ಗಂಭೀರ ಗಾಯ
ಕಾರ್ಕಳ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಿದ್ದ ರಭಸಕ್ಕೆ ಲಾರಿಯಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ.
ಈ ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೂವರಲ್ಲಿ ಓರ್ವನನ್ನು ಶೃಂಗೇರಿ ಮೂಲದ ನಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯ ಸುಮಿತ್ ನಲ್ಲೂರು ಸೇರಿದಂತೆ ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪುತ್ತೂರು : ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು…Vishwanews24
