ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – vishwanews24

Featured, ಉಡುಪಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಕಾರ್ಕಳ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಳಿಕೆ ಬೋರ್ಡು ಶಾಲೆ ಬಳಿಯಲ್ಲಿ ನಡೆದಿದೆ.

ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ನಂದಳಿಕೆ ಗ್ರಾಮದ ಬೋರ್ಡು ಶಾಲೆ ಬಳಿಯ ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ.

 ಕಾಪು : ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ – vishwanews24

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು ತೊಂದರೆ ಉಂಟಾಯಿತು. ಕಾರು ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ

Leave a Reply