Featured

ಕಾರ್ಕಳ ಜಮೀನು ವಿವಾದ : ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ – Vishwanews24

ಕಾರ್ಕಳ ಜಮೀನು ವಿವಾದ : ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ – Vishwanews24

ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಮಾರ್ಚ್ 6ರ ಭಾನುವಾರ ಸಂಭವಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಶೇಖರ್ (50) ಕೊಲೆಯಾದವರು. ಅವರ ಕಿರಿಯ ಸಹೋದರ ರಾಜು (35) ಕೊಲೆ ಮಾಡಿದ ಆರೋಪಿ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಕೊಲೆ ನಡೆದಿದೆ.ಶೇಖರ್ ಮತ್ತು ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದರು.ಶೇಖರ್ ತನ್ನ ತಾಯಿಗೆ ಮಂಜೂರಾದ ಜಮೀನಿನಲ್ಲಿ ವಾಸವಾಗಿದ್ದರು. ಈ ಹಿಂದೆ ಶೇಖರ್ ಜತೆ ವಾಸವಾಗಿದ್ದ ರಾಜು ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪ್ರತ್ಯೇಕವಾಗಿ ಶೆಡ್‌ನಲ್ಲಿ ವಾಸಿಸಲು ಆರಂಭಿಸಿದ್ದರು. ಭಾನುವಾರ, ಶೇಖರ್ ತನ್ನ ಮನೆ ಅಂಗಳದಲ್ಲಿ ಕೆಲಸದಲ್ಲಿ ನಿರತನಾಗಿದ್ದರು ಮತ್ತು ಮೂವರು ಕಾರ್ಮಿಕರ ಸಹಾಯದಿಂದ ಜಲ್ಲಿಕಲ್ಲನ್ನು ತನ್ನ ಮನೆಗೆ ಸಾಗಿಸುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ ಆಗಮಿಸಿದ ರಾಜು ದುರಸ್ತಿ ಕೆಲಸ ಮಾಡದಂತೆ ಆಕ್ಷೇಪಿಸಿದ್ದ. ಅದಕ್ಕೆ ಶೇಖರ್ ಕಿವಿಗೊಡದೆ ತನ್ನ ಪಾಡಿಗೆ ಕೆಲಸ ಮುಂದುವರಿಸಿದ್ದರು.

ಈ ವೇಳೆ ಬೆದರಿಕೆ ಹಾಕಿ ಮನೆಯೊಳಗೆ ತೆರಳಿದ ರಾಜು ಚೂರಿಯನ್ನು ಜತೆಗೆ ತಂದು ಅಣ್ಣನ ಕುತ್ತಿಗೆ ಮತ್ತು ಹೊಟ್ಟೆಗೆ ತಿವಿದಿದ್ದಾನೆ. ಗಂಭೀರ ಗಾಯಗೊಂಡು ಅತೀವ ರಕ್ತಸ್ರಾವದಿಂದ ಶೇಖರ್ ಮೃತಪಟ್ಟಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

38 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

56 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago