ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಮಾರ್ಚ್ 6ರ ಭಾನುವಾರ ಸಂಭವಿಸಿದೆ.
ಪರಿಶಿಷ್ಟ ಜಾತಿಗೆ ಸೇರಿದ ಶೇಖರ್ (50) ಕೊಲೆಯಾದವರು. ಅವರ ಕಿರಿಯ ಸಹೋದರ ರಾಜು (35) ಕೊಲೆ ಮಾಡಿದ ಆರೋಪಿ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಕೊಲೆ ನಡೆದಿದೆ.ಶೇಖರ್ ಮತ್ತು ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದರು.ಶೇಖರ್ ತನ್ನ ತಾಯಿಗೆ ಮಂಜೂರಾದ ಜಮೀನಿನಲ್ಲಿ ವಾಸವಾಗಿದ್ದರು. ಈ ಹಿಂದೆ ಶೇಖರ್ ಜತೆ ವಾಸವಾಗಿದ್ದ ರಾಜು ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪ್ರತ್ಯೇಕವಾಗಿ ಶೆಡ್‌ನಲ್ಲಿ ವಾಸಿಸಲು ಆರಂಭಿಸಿದ್ದರು. ಭಾನುವಾರ, ಶೇಖರ್ ತನ್ನ ಮನೆ ಅಂಗಳದಲ್ಲಿ ಕೆಲಸದಲ್ಲಿ ನಿರತನಾಗಿದ್ದರು ಮತ್ತು ಮೂವರು ಕಾರ್ಮಿಕರ ಸಹಾಯದಿಂದ ಜಲ್ಲಿಕಲ್ಲನ್ನು ತನ್ನ ಮನೆಗೆ ಸಾಗಿಸುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ ಆಗಮಿಸಿದ ರಾಜು ದುರಸ್ತಿ ಕೆಲಸ ಮಾಡದಂತೆ ಆಕ್ಷೇಪಿಸಿದ್ದ. ಅದಕ್ಕೆ ಶೇಖರ್ ಕಿವಿಗೊಡದೆ ತನ್ನ ಪಾಡಿಗೆ ಕೆಲಸ ಮುಂದುವರಿಸಿದ್ದರು.
ಈ ವೇಳೆ ಬೆದರಿಕೆ ಹಾಕಿ ಮನೆಯೊಳಗೆ ತೆರಳಿದ ರಾಜು ಚೂರಿಯನ್ನು ಜತೆಗೆ ತಂದು ಅಣ್ಣನ ಕುತ್ತಿಗೆ ಮತ್ತು ಹೊಟ್ಟೆಗೆ ತಿವಿದಿದ್ದಾನೆ. ಗಂಭೀರ ಗಾಯಗೊಂಡು ಅತೀವ ರಕ್ತಸ್ರಾವದಿಂದ ಶೇಖರ್ ಮೃತಪಟ್ಟಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…