ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ.
ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಜೀವ ಕಳೆದುಕೊಂಡವಳು.
ಮೇ 26ರ ಸಂಜೆ 4:00 ಗಂಟೆಗೆ ಮನೆ ಪರಿಸರದಲ್ಲಿ ಸಂಬಂಧಿಕ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿತ್ತು.
ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಆರೋಗ್ಯ ತಪಾಸಣೆ ನಡೆಸಿದ್ದು ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…