ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜ.27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಡೆಯಲಿದೆ.
ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆಯ ಸಚಿವ ಆನಂದ್ ಸಿಂಗ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ರವೀಂದ್ರ ಸುವರ್ಣ, ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ.ಟಿ ನಿಟ್ಟಾಲಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…