Featured

ಕಾರ್ಕಳ: ಟಿಪ್ಪರ್ – ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ – vishwanews24

ಕಾರ್ಕಳ: ಟಿಪ್ಪರ್ – ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.

ಟಿಪ್ಪರ್ ನಲ್ಲಿ ಕ್ರಶರ್ ತುಂಬಿಕೊಂಡು ಬರಲಾಗುತ್ತಿದ್ದು, ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಇನ್ನು ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆಯ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

18 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

35 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

44 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

51 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

1 hour ago