Featured

ಕಾರ್ಕಳ: ಟೈರ್ ಸ್ಪೋಟಗೊಂಡು ಕಾರು ಅಪಘಾತ – ತೆಲಂಗಾಣ ಶಾಸಕ ರೋಹಿತ್‌ ರೆಡ್ಡಿ ಪವಾಡ ಸದೃಶ್ಯ ಪಾರು – Vishwanews24

ಕಾರ್ಕಳ: ಟೈರ್ ಸ್ಪೋಟಗೊಂಡು ಕಾರು ಅಪಘಾತ – ತೆಲಂಗಾಣ ಶಾಸಕ ರೋಹಿತ್‌ ರೆಡ್ಡಿ ಪವಾಡ ಸದೃಶ್ಯ ಪಾರು

ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪ್ ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ತೆಲಂಗಾಣದ ಟೆಂಡೂರ್ ಕ್ಷೇತ್ರದ ಶಾಸಕ ಪಂಚುಗುಲ ರೋಹಿತ್‌ ರೆಡ್ಡಿ ಚಲಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಜೀಪ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.

ಶಾಸಕ ರೋಹಿತ್‌ ರೆಡ್ಡಿ ಹೈದರಾಬಾದ್‌ನಿಂದ ಮಂಗಳೂರು ಏರ್‌ಪೋರ್ಟ್‌ಗೆ ಇಂದು ಬೆಳಗ್ಗೆ ಆಗಮಿಸಿದ್ದರು. ಬಳಿಕ ಅವರು ಕಾರ್ಕಳ ಮಾರ್ಗವಾಗಿ ಶೃಂಗೇರಿ ಭೇಟಿಗೆ ಹೊರಟಿದ್ದರು. ಈ ವೇಳೆ ಇಲ್ಲಿನ ಮುಡಾರು-ನಲ್ಲೂರು ಕ್ರಾಸ್‌ ಬಳಿ ಕಾರಿನ ಟಯರ್‌ ಬ್ಲಾಸ್ಟ್‌ ಆಗಿ ಅಪಘಾತ ಸಂಭವಿಸಿದೆ.

ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂಗೊಂಡಿದೆ. ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago