Featured

ಕಾರ್ಕಳ : ದಲಿತ ಪುರಸಭಾ ಸದಸ್ಯೆಗೆ ಜಾತಿ ನಿಂದನೆ ಆರೋಪ : ದೂರು ದಾಖಲು – Vishwanews24

ಕಾರ್ಕಳ: ದೇವಸ್ಥಾನದಲ್ಲಿ ಊಟ ಬಡಿಸದಂತೆ ಮತ್ತು ಒಳಗೆ ಬಾರದಂತೆ ದಲಿತ ಪುರಸಭಾ ಸದಸ್ಯೆಗೆ ಜಾತಿ ನಿಂದನೆ , ಬೆದರಿಕೆ ಆರೋಪ : ದೂರು ದಾಖಲು

ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ ಪುರಸಭಾ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ(42) ಎಂಬವರಿಗೆ ದೇವಸ್ಥಾನದಲ್ಲಿ ಊಟ ಬಡಿಸದಂತೆ ಮತ್ತು ಒಳಗೆ ಬಾರದಂತೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಮಾ ರಾಣೆ ಕಾರ್ಕಳ ಮಾರಿಗುಡಿಯ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದರು. ಮಾ.12ರಂದು ಬೆಳಗ್ಗೆ ದೇವಸ್ಥಾನದ ಊಟದ ವಿಚಾರವಾಗಿ ವಾಟ್ಸಾಪ್‌ನಲ್ಲಿ ಬಂದ ಸಂದೇಶದ ಬಗ್ಗೆ ಕಾರ್ಕಳ ಎಸ್‌ವಿಟಿ ಸರ್ಕಲ್ ನಿವಾಸಿ ರಮಿತಾ ಶೈಲೇಂದ್ರ, ಪ್ರತಿಮಾ ರಾಣೆ ಅವರನ್ನುದ್ದೇಶಿಸಿ ಪುರಸಭಾ ಕಟ್ಟಡದ ಬಳಿ, ಎಸ್‌ಸಿ ಎಸ್‌ಟಿಯವರಿಗೆ ಊಟ ಬಡಿಸಲು ಬಿಡಬೇಡಿ, ಅವರನ್ನು ಒಳ ಬಿಟ್ಟಲ್ಲಿ ಮೈಲಿಗೆ ಆಗುತ್ತದೆ ಎಂದು ಹೇಳಿ ಸಾರ್ವಜನಿಕವಾಗಿ ನಿಂದಿಸಿದರೆಂದು ದೂರಲಾಗಿದೆ.

ಇದೇ ವಿಚಾರ ವಾಟ್ಸಾಪ್ ಮೂಲಕ ಬಂದಿರುವ ಬಗ್ಗೆ ಆರೋಪಿಯು ಪ್ರತಿಮಾ ಅವರಲ್ಲಿ ಈ ವಾಟ್ಸಾಪ್ ಸಂದೇಶವನ್ನು ನೀವೇ ಕಳುಹಿಸಿ ಕೊಟ್ಟಿರುತ್ತೀರಾ ಎಂದು ಮಾ.14ರಂದು ಮಧ್ಯಾಹ್ನ 1.45ಕ್ಕೆ ಪುರಸಭಾ ರಸ್ತೆಯಲ್ಲಿ ಪ್ರತಿಮಾ ಅವರನ್ನು ಅಡ್ಡಕಟ್ಟಿ ಗಲಾಟೆ ಮಾಡಿದ್ದು, ನೀನು ಎಸ್‌ಸಿ ದೇವಸ್ಥಾನದ ಒಳಗೆ ಬರಬಾರದು ಎಂದು ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.

ಅದರಂತೆ ಆರೋಪಿ ವಿರುದ್ಧ ಐಪಿಸಿ 1860(ಯು/ಎಸ್341, 504), ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, 1986(ಯು/ಎಸ್-3(1)(ಎಸ್), 3(2)(ವಿ-ಎ)ಅಡಿಯಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

6 minutes ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

39 minutes ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

3 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

3 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

4 hours ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

4 hours ago