Featured

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ – vishwanews24

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ

ಕಾರ್ಕಳ: ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಯನ್ನು ಮತ್ತೆ ಆರಂಭಿಸಲು ಕಂಪನಿ ಅಧಿಕಾರಿಗಳು ಮುಂದಾಗುತ್ತಿದ್ದಂತೆ ವಿಷಯ ತಿಳಿದ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಧಾವಿಸಿ ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ ‌.

ಕೇಂದ್ರ ಬಿಜೆಪಿ ಸರಕಾರದ ಯೋಜನೆ ಇದಾಗಿದ್ದು ರಾಜ್ಯ ಬಿಜೆಪಿ ಸರಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಸುನೀಲ್ ಕುಮಾರ್ ಅನುಮತಿಯಿಂದ ಯೋಜನೆಯುವ ಅನುಮೋದನೆಗೊಂಡಿದೆ. ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಹೈ ಟೆನ್ಷನ್ ವಿದ್ಯುತ್ ತಂತಿಗಳು ಇನ್ನಾ ಗ್ರಾಮದ ಫಲವತ್ತಾದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದ ನಡುವೆ ಹಾದು ಹೋಗುವುದರಿಂದ ಇನ್ನಾ ಗ್ರಾಮದ ನೂರಾರು ಕೃಷಿಕರು ಸಂತ್ರಸ್ತರಾಗುವ ಅಪಾಯವಿದೆ ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಹಲವು ಅವಧಿಗೆ ಶಾಸಕರನ್ನಾಗಿ ಗೆಲ್ಲಿಸಿದ ಕಾರ್ಕಳ ಕ್ಷೇತ್ರದ ಜನರ ಬದುಕಿಗೆ ಕೊಳ್ಳಿ ಇಡುವ ಯೋಜನೆಯನ್ನು ಉಡುಗೊರೆಯಾಗಿ ಕೊಟ್ಟ ಪರಿಣಾಮ ಇಂದು ಇನ್ನಾ ಗ್ರಾಮದ ಜನತೆ ತಮ್ಮ ಕೃಷಿ ಭೂಮಿ ಮನೆಮಠಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ‌ ಎಂದು ಉದಯ್ ಶೆಟ್ಟಿ ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು, ಕೃಷಿಕರು, ಗ್ರಾಮಸ್ಥರು ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago