Featured

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ – vishwanews24

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಇಂದು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.

ಆರೋಪಿ ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ಧುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಗೊಳಿಸಿತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago