ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಇಂದು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.
ಆರೋಪಿ ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ಧುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಗೊಳಿಸಿತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…