Featured

ಕಾರ್ಕಳ : ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ : ಮುನಿಯಾಲು ಉದಯಕುಮಾರ್‌ ಶೆಟ್ಟಿ – vishwanews24

ವಿಗ್ರಹ ನಕಲಿ ಅಲ್ಲ ಎಂದು ಶಾಸಕ ಸುನಿಲ್‌ಕುಮಾರ್‌ ಪ್ರಮಾಣ ಮಾಡಲಿ..

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ..

ಶಾಸಕರು ಕ್ಷಮಾಪಣೆ ಕೇಳಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ :ಮುನಿಯಾಲು ಉದಯಕುಮಾರ್‌ ಶೆಟ್ಟಿ

ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್‌ಕುಮಾರ್‌ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್‌ ಶೆಟ್ಟಿ ಹೇಳಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್‌ ಕುಮಾರ್‌ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್‌ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.

ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್‌ಚಂದ್ರಪಾಲ್‌ ನಕ್ರೆ, ವಿವೆಕಾನಂದ ಶೆಣೈ, ದಿನೇಶ್‌, ಅಜಿತ್‌ಕುಮಾರ್‌ ಹೆಗ್ಡೆ, ತಾರಾನಾಥ ಕೋಟ್ಯಾನ್‌, ದಿನೇಶ್‌ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

10 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

10 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

11 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

13 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

13 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

13 hours ago