Featured

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ – Vishwanews24

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ

ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌ ಈ ಕುರಿತು ಪ್ರಕಟಿಸಿದ್ದಾರೆ. 2015ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡ ಪ್ರಸನ್ನ ಅವರು 2017ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಎಸ್‌ಐ ಆಗಿ ಅಧಿಕಾರ ವಹಿಸಿದ್ದರು. ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅಲ್ಲಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. 2022ರ ಜನವರಿಯಲ್ಲಿ ಕಾರ್ಕಳ ಎಸ್‌ಐ ಆಗಿ ವರ್ಗಾವಣೆ ಹೊಂದಿದ ಪ್ರಸನ್ನ ಅವರು ತನ್ನ ಕರ್ತವ್ಯಪರತೆ, ದಕ್ಷತೆಯಿಂದಲೇ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.

ನೆಟ್ಟಾರು ಪ್ರಕರಣ ಸೇರಿದಂತೆ ಹಲವು ಕೊಲೆ, ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಸನ್ನ ಅವರು ಎನ್‌ಐಎ ತಂಡದಲ್ಲೂ ಸಕ್ರಿಯವಾಗಿದ್ದರು. ಕಾರ್ಕಳದಲ್ಲಿ ನಡೆದ ಕಾರ್ಕಳ ಉತ್ಸವ, ಪರಶುರಾಮ ಥೀಮ್‌ ಪಾರ್ಕ್‌ ಕಾರ್ಯಕ್ರಮ ಸಂದರ್ಭ ಸುವ್ಯವಸ್ಥೆ ಮತ್ತು ಸಂಚಾರಿ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

18 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

40 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

48 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago