ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಈ ಕುರಿತು ಪ್ರಕಟಿಸಿದ್ದಾರೆ. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಪ್ರಸನ್ನ ಅವರು 2017ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಎಸ್ಐ ಆಗಿ ಅಧಿಕಾರ ವಹಿಸಿದ್ದರು. ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅಲ್ಲಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. 2022ರ ಜನವರಿಯಲ್ಲಿ ಕಾರ್ಕಳ ಎಸ್ಐ ಆಗಿ ವರ್ಗಾವಣೆ ಹೊಂದಿದ ಪ್ರಸನ್ನ ಅವರು ತನ್ನ ಕರ್ತವ್ಯಪರತೆ, ದಕ್ಷತೆಯಿಂದಲೇ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.
ನೆಟ್ಟಾರು ಪ್ರಕರಣ ಸೇರಿದಂತೆ ಹಲವು ಕೊಲೆ, ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಸನ್ನ ಅವರು ಎನ್ಐಎ ತಂಡದಲ್ಲೂ ಸಕ್ರಿಯವಾಗಿದ್ದರು. ಕಾರ್ಕಳದಲ್ಲಿ ನಡೆದ ಕಾರ್ಕಳ ಉತ್ಸವ, ಪರಶುರಾಮ ಥೀಮ್ ಪಾರ್ಕ್ ಕಾರ್ಯಕ್ರಮ ಸಂದರ್ಭ ಸುವ್ಯವಸ್ಥೆ ಮತ್ತು ಸಂಚಾರಿ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…