ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧಿಸುತ್ತೇನೆ, ಬೇರೆ ಕ್ಷೇತ್ರಕ್ಕೆ ಓಡಿ ಹೋಗುವುದಿಲ್ಲ : ಸಚಿವ ಸುನಿಲ್‌ ಕುಮಾರ್‌ – Vishwanews24

Featured, ಉಡುಪಿ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧಿಸುತ್ತೇನೆ, ಬೇರೆ ಕ್ಷೇತ್ರಕ್ಕೆ ಓಡಿ ಹೋಗುವುದಿಲ್ಲ : ಸಚಿವ ವಿ. ಸುನಿಲ್‌ ಕುಮಾರ್‌

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧಿಸುತ್ತೇನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿ ಹೋಗುವುದಿಲ್ಲ ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್‌ ಪೈ ಸಭಾ ಭವನದಲ್ಲಿ ನಡೆದ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಸರ್ಕಾರದ ಸಾಧನೆಯನ್ನು ಬೂತ್‌ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕಾಗಿ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ – Vishwanews24

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಲವ್‌ ಜಿಹಾದ್‌ ವಿರುದ್ಧ ಕಾನೂನು , ಗೋಹತ್ಯೆ ನಿಷೇಧ, ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿದ್ದು, ಹಿಜಾಬ್‌ ವಿರುದ್ಧ ಗಟ್ಟಿಧ್ವನಿಯಾಗಿ ನಿಂತು ಸಮವಸ್ತ್ರ ಧರಿಸಲು ಕಾನೂನು ಜಾರಿಗೊಳಿಸಿದ್ದ ಹೀಗೆ ಅನೇಕ ಉತ್ತಮ ಕ್ರಮಗಳನ್ನು ಬಿಜೆಪಿ ಸರ್ಕಾರ ಕೈಗೊಂಡಿದೆ. ಇವುಗಳನ್ನೆಲ್ಲ ಕಾರ್ಯಕರ್ತರು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕೆಂದು ಕಿವಿಮಾತು ಹೇಳಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 108 ಅಡಿ ಎತ್ತರದ ಟಿಪ್ಪು ಪ್ರತಿಮೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಜನರು ಅಭಿವೃದ್ಧಿ ಕಾರ್ಯಗಳನ್ನು ಮರೆತು ಇಂಥ ಅಪಪ್ರಚಾರಗಳನ್ನು ನಂಬುತ್ತಿದ್ದಾರೆ. ಹಾಗಾಗಿ ಬಿಜೆಪಿ ಕಾರ್ಯಕರ್ತರು ಜನರಿಗೆ ನಮ್ಮ ಸರ್ಕಾರದ ಸಾಧನೆಗಳನ್ನು ಮುಟ್ಟಿಸಬೇಕು ಎಂದರು.

ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ವಸೂಲಿ ವಿರೋಧಿಸಿ ಹೆಜಮಾಡಿಯಲ್ಲಿ ಧರಣಿ – Vishwanews24

 

 

Leave a Reply