ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧಿಸುತ್ತೇನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿ ಹೋಗುವುದಿಲ್ಲ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಸರ್ಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕಾಗಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಲವ್ ಜಿಹಾದ್ ವಿರುದ್ಧ ಕಾನೂನು , ಗೋಹತ್ಯೆ ನಿಷೇಧ, ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿದ್ದು, ಹಿಜಾಬ್ ವಿರುದ್ಧ ಗಟ್ಟಿಧ್ವನಿಯಾಗಿ ನಿಂತು ಸಮವಸ್ತ್ರ ಧರಿಸಲು ಕಾನೂನು ಜಾರಿಗೊಳಿಸಿದ್ದ ಹೀಗೆ ಅನೇಕ ಉತ್ತಮ ಕ್ರಮಗಳನ್ನು ಬಿಜೆಪಿ ಸರ್ಕಾರ ಕೈಗೊಂಡಿದೆ. ಇವುಗಳನ್ನೆಲ್ಲ ಕಾರ್ಯಕರ್ತರು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕೆಂದು ಕಿವಿಮಾತು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 108 ಅಡಿ ಎತ್ತರದ ಟಿಪ್ಪು ಪ್ರತಿಮೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಜನರು ಅಭಿವೃದ್ಧಿ ಕಾರ್ಯಗಳನ್ನು ಮರೆತು ಇಂಥ ಅಪಪ್ರಚಾರಗಳನ್ನು ನಂಬುತ್ತಿದ್ದಾರೆ. ಹಾಗಾಗಿ ಬಿಜೆಪಿ ಕಾರ್ಯಕರ್ತರು ಜನರಿಗೆ ನಮ್ಮ ಸರ್ಕಾರದ ಸಾಧನೆಗಳನ್ನು ಮುಟ್ಟಿಸಬೇಕು ಎಂದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…