ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಣಜಾರು ಗ್ರಾಮದ ಕಡೆಬರ್ಕೆ ನಿವಾಸಿ ಸುರೇಶ್ ಶೆಟ್ಟಿ (51) ಎಂದು ಗುರುತಿಸಲಾಗಿದೆ.
ನದಿಯ ದಡದಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸೇತುವೆಯ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಸಂಬಂಧಿಕರು ಮೃತದೇಹದ ಗುರುತು ಪತ್ತೆಹಚ್ಚಿದ್ದಾರೆ.
ಸುರೇಶ್ ಶೆಟ್ಟಿ ಅವರು ಅಕ್ಟೋಬರ್ 9ರಂದು ಮಧ್ಯಾಹ್ನ 2 ಗಂಟೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.
ಮನೆಯಿಂದ ಕಟೀಲಿಗೆ ತೆರಳಿದ್ದ ಅವರು, ಅಲ್ಲಿನ ಸಂಬಂಧಿಕರ ಅಂಗಡಿಯಲ್ಲಿ ಬ್ಯಾಗ್ ಇರಿಸಿ ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಎಣ್ಣೆಹೊಳೆ ಸೇತುವೆ ಸಮೀಪ ಮೃತದೇಹ ಪತ್ತೆಯಾಗಿದೆ.ಕಾರ್ಕಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…